Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ಸಿಕ್ಕಬೇಕೆಂದು ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲೆ ಫಾರಿಜೆವ್, ಅನಿ ಖಾಯ್ದೆ ಶಿಕ್ವುತಲೆ ಜೆಜುಕ್ ಸಿರ್ಕುನ್ ಘಾಲುಕ್ ಎಕ್ ಅವ್ಕಾಸ್ ಹುಡ್ಕುಕ್ ಲಾಗಲ್ಲೆ, ತೆನಿ ಜಗ್ಗೊಳ್ ಯೆವ್ನ್ ಸಬ್ಬತಾಚ್ಯಾ ದಿಸಿ ಜೆಜು ತ್ಯಾ ಹಾತಾಕ್ ವಾರೆಮಾರಲ್ಲ್ಯಾ ಮಾನ್ಸಾಕ್ ಗುನ್ ಕರ್‍ತಾ ಕಾಯ್ ಬಗುವಾ ಮನುನ್ ರಾಕುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:7
14 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು