Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಂಚ್ಯಾತ್ಲ್ಯಾ ದೊಗ್ಯಾಕ್ನಿ ಬಲ್ವುನ್, ಜೆಜುಕ್ಡೆ ಜಾವ್ನ್ “ಜುವಾಂವಾನ್ ಯೆತಲೊ ಹಾಯ್, ಮನುನ್ ಸಾಂಗಲ್ಲೊ ತಿಯಾಚ್ ಕಾಯ್, ಅಮಿ ಅಜುನ್ ಕೊನಾಚಿ ವಾಟ್ ರಾಕುಚೆ?” ಮನುನ್ ಇಚಾರಾ ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:19
38 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.


ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.


ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?


ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು


ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.


ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.


ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು