Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:21 - ಕನ್ನಡ ಸಮಕಾಲಿಕ ಅನುವಾದ

21 ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾಚ್ ಜೆಜುನ್ ಸುಮಾರ್ ಲೊಕಾಂಚಿ ದುಕ್ನಿ, ರೊಗಾ ಆರಾಮ್ ಕರ್‍ಲ್ಯಾನ್, ಅನಿ ಗಿರೆ ಸೊಡ್ವುಲ್ಯಾನ್,ಅನಿ ಸುಮಾರ್ ಕುಡ್ಡ್ಯಾಕ್ನಿ ಡೊಳೆ ದಿಸಿ ಸರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:21
12 ತಿಳಿವುಗಳ ಹೋಲಿಕೆ  

ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.


ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.


ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.


ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.


“ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು