Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:25 - ಕನ್ನಡ ಸಮಕಾಲಿಕ ಅನುವಾದ

25 ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಾಯ್ ಬಗುಕ್ ಗೆಲ್ಲ್ಯಾಶಿ, ತುಮಿ? ಬರೆ ಕರುನ್ ನೆಸಲ್ಲ್ಯಾ ಮಾನ್ಸಾಕ್ ಬಗುಕ್ ಗೆಲ್ಲ್ಯಾಶಿ? ತಸೆ ಬರೆ ನೆಸುನ್, ಆರಾಮಾಚೆ ಜಿವನ್ ಕರ್‍ತಲಿ ಲೊಕಾ ರಾಜಾಂಚ್ಯಾ ಘರಾತ್ನಿ ಗಾವ್ತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:25
16 ತಿಳಿವುಗಳ ಹೋಲಿಕೆ  

ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.


ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.


ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?


ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.


ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು