Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:47 - ಕನ್ನಡ ಸಮಕಾಲಿಕ ಅನುವಾದ

47 ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತಸೆ ಮನುನ್ ಮಿಯಾ ತುಕಾ ಸಾಂಗ್ತಾ, ತೆನಿ ದಾಕ್ವಲ್ಲೊ ಹ್ಯೊ ಮೊಟೊ ಪ್ರೆಮ್, ತೆನಿ ಕರಲ್ಲಿ ಸುಮಾರ್ ಪಾಪಾ ಮಾಪ್ ಹೊಲಿ ಮನುನ್ ದಾಕ್ವುತಾ. ಕಮಿ ಪಾಪಾಂಚಿ ಮಾಪಿ ಗಾವಲ್ಲೊ, ಕಮಿ ಪ್ರೆಮ್ ದಾಕ್ವುತಾ”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:47
25 ತಿಳಿವುಗಳ ಹೋಲಿಕೆ  

ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.


ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು