Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು ‘ಬಾ,’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ ‘ಹೋಗು,’ ಎಂದರೆ ಹೋಗುತ್ತಾನೆ. ಸೇವಕನಿಗೆ ‘ಇಂಥದ್ದನ್ನು ಮಾಡು,’ ಎಂದರೆ ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮಿಯಾಬಿ ಮಾಜ್ಯಾನ್ ಮೊಟ್ಯಾಂಚ್ಯಾ ಅದಿಕಾರಾಚ್ಯಾ ಖಾಲ್ತಿ ಹಾಂವ್, ಅನಿ ಮಾಜ್ಯಾ ಹಾತಿ ಖಾಲ್ತಿಬಿ ಸೈನಿಕಾ ಹಾತ್,ಎಕ್ಲ್ಯಾಕ್ ಮಿಯಾ ಜಾ! ಮಟ್ಲ್ಯಾರ್, ತೊ ಜಾತಾ, ಅನಿ ಎಕ್ಲ್ಯಾಕ್ ಯೆ! ಮಟ್ಲ್ಯಾರ್, ತೊ ಯೆತಾ; ಅನಿ ಆಳಾಕ್ನಿ ಹೆ ಕರಾ ಮಟ್ಲ್ಯಾರ್, ತೆನಿ ಕರ್‍ತ್ಯಾತ್” ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:8
12 ತಿಳಿವುಗಳ ಹೋಲಿಕೆ  

ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.


ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.


ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.


ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.


ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು