Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:1 - ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಉಲ್ಲ್ಯಾ ಎಳಾಚ್ಯಾ ಮಾನಾ, ಜೆಜು ಗಾಂವಾತ್ನಿ, ಅನಿ ಬಾರಿಕ್ಲ್ಯಾ ಗಾಂವಾತ್ನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ಗೆತ್ ಗೆಲೊ, ತೆಚಿ ಬಾರಾ ಶಿಸಾಬಿ ತೆಚ್ಯಾ ವಾಂಗ್ಡಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:1
18 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.


ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.


ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು