ಲೂಕ 8:12 - ಕನ್ನಡ ಸಮಕಾಲಿಕ ಅನುವಾದ12 ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ವಾಟೆಚ್ಯಾ ದಂಡೆಕ್ ಪಡಲ್ಲ್ಯಾ ಭ್ಹಿಂಯಾ ಮಟ್ಲ್ಯಾರ್ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್: ಖರೆ ಗಿರೊ ತೆಂಚ್ಯಾ ಮನಾತ್ನಾ ತ್ಯಾ ಗೊಸ್ಟಿಯಾ ಕಾಡುನ್ ಘೆವ್ನ್, ಅಶೆ ತೆಂಕಾ ವಿಶ್ವಾಸಾತ್ನಾ, ಅನಿ ಸುಟ್ಕಾ ಹೊತಲ್ಯಾತ್ನಾ ಧುರ್ ಕರ್‍ತಾ. ಅಧ್ಯಾಯವನ್ನು ನೋಡಿ |