ಲೂಕ 8:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”. ಅಧ್ಯಾಯವನ್ನು ನೋಡಿ |