ಲೂಕ 8:28 - ಕನ್ನಡ ಸಮಕಾಲಿಕ ಅನುವಾದ28 ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28-29 ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆನಿ ಜೆಜುಕ್ ಬಗಟಲ್ಲ್ಯಾ ತನ್ನಾ, ಮೊಟ್ಯಾನ್ ಬೊಬ್ ಮಾರ್‍ಲ್ಯಾನ್, ಅನಿ ಜೆಜುಚ್ಯಾ ಪಾಂಯಾತ್ನಿ ಪಡುನ್ ಜೆಜುಕ್, “ಜೆಜು ಮೊಟ್ಯಾ ದೆವಾಚ್ಯಾ ಲೆಕಾ! ಮಾಜೆಕ್ನಾ ತುಕಾ ಕಾಯ್ ಪಾಜೆ ಹೊಲಾ? ಮಾಕಾ ಶಿಕ್ಷಾ ದಿವ್‍ನಕೊ ಮನುನ್ ಮಿಯಾ ತುಜೆಕ್ಡೆ ಮಾಗ್ನಿ ಕರ್‍ತಾ” ಮನುನ್ ಬೊಬ್ ಮಾರುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |