Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:3 - ಕನ್ನಡ ಸಮಕಾಲಿಕ ಅನುವಾದ

3 ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಜೊನ್ನಾ ಹಿಚೊ ಘೊ ಖುಜಾ ಮನ್ತಲೊ ಹೆರೊದಾಚ್ಯಾ ಘರಾತ್ ಎಕ್ ಅದಿಕಾರಿ ಹೊವ್ನ್ ಹೊತ್ತೊ, ಅನಿ ಸುಸಾನ್ನಾ, ಅನಿ ಸುಮಾರ್ ಬಾಯ್ಕಾಮನ್ಸಾ ಅಪ್ನಾಚ್ಯಾ ಸ್ವತಾಚ್ಯಾ ಪೈಶಾನಿ, ಜೆಜುಕ್ ಅನಿ ಶಿಸಾಕ್ನಿ ಮಜತ್ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:3
19 ತಿಳಿವುಗಳ ಹೋಲಿಕೆ  

ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,


ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.


ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.


“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.


ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.


ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು