Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:33 - ಕನ್ನಡ ಸಮಕಾಲಿಕ ಅನುವಾದ

33 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ತ್ಯಾ ಮಾನ್ಸಾಕ್ ಸೊಡುನ್ ಡುಕ್ರಾತ್ನಿ ಜಾವ್ನ್ ಗುಸ್ಲ್ಯಾನಿ, ಡುಕ್ರಾಂಚೊ ಸಗ್ಳೊ ಹಿಂಡ್ ಮಡ್ಡಿ ವೈನಾ ಪಾನಿಯಾತ್ ಪಡುನ್ ಬುಡುನ್ ಮರುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:33
8 ತಿಳಿವುಗಳ ಹೋಲಿಕೆ  

ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.


ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.


ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.


ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು