Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:39 - ಕನ್ನಡ ಸಮಕಾಲಿಕ ಅನುವಾದ

39 “ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ “ತುಜ್ಯಾ ಘರಾಕ್ ಜಾ, ಅನಿ ತುಜ್ಯಾ ಘರಾತ್ಲ್ಯಾಕ್ನಿ ದೆವಾನ್ ಕಾಯ್-ಕಾಯ್ ಕರ್‍ಲ್ಯಾನ್ ತೆ ಸಾಂಗ್”, ಮನುನ್ ಸಾಂಗ್ಲ್ಯಾನ್. ತೊ ಮಾನುಸ್ ಶಾರಾತ್ ಗೆಲೊ,ಅನಿ ಜೆಜುನ್ ಅಪ್ನಾಕ್ ಕಾಯ್-ಕಾಯ್ ಕರಲ್ಲೆ ಸಗ್ಳೆ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:39
13 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.


ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.


ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.


ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,


ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು