Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:44 - ಕನ್ನಡ ಸಮಕಾಲಿಕ ಅನುವಾದ

44 ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಕೆಯು ಒಬ್ಬರಿಂದಲೂ ಗುಣ ಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತ ಹರಿಯುವದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತಿ ಜೆಜುಚ್ಯಾ ಫಾಟಿ ಯೆಲಿ ಅನಿ ತೆನಿ ಜೆಜುಚ್ಯಾ ಆಂಗಾ ವೈಲ್ಯಾ ಕಪ್ಡ್ಯಾಚ್ಯಾ ತುದಿಚ್ಯಾ ಘೊಂಡ್ಯಾಕ್ ತೆನಿ ಹಾತ್ ಲಾವ್ಲಿನ್,ತನ್ನಾ ರಗಾತ್ ಜಾತಲೆ ಬಂದ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:44
15 ತಿಳಿವುಗಳ ಹೋಲಿಕೆ  

ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.


ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು.


ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.


ಅವರ ಪಾದಗಳ ಬಳಿಯಲ್ಲಿ ನಿಂತು, ಅಳುತ್ತಾ ಅವರ ಪಾದಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ, ತನ್ನ ತಲೆಕೂದಲಿನಿಂದ ಒರೆಸಿ, ಅವರ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.


ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.


ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.


ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು