Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:52 - ಕನ್ನಡ ಸಮಕಾಲಿಕ ಅನುವಾದ

52 ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಸಗ್ಳೆ ಜಾನಾ ಪೊರಾ ಸಾಟ್ನಿ ತಳ್ಮಳಿತ್, ಅನಿ ರಡಿತ್, ತನ್ನಾ ಜೆಜುನ್ ತೆಂಕಾ “ರಡುನಕಾಶಿ; ತೆ ಚೆಡು ಮರುಕ್ನಾ, ನಿದ್ಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:52
14 ತಿಳಿವುಗಳ ಹೋಲಿಕೆ  

ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.


ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು.


“ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ಗೋಳಾಡಲಿಲ್ಲ,’ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.


ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.


ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು