Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾತುರ್‍ಲೆ ಅನಿ ಉಲ್ಲೆ ಗುಂಡಾಡ್ ಜಿಮ್ನಿ ವರ್‍ತಿ ಪಡ್ಲೆ, ಅನಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ಥೈ ಥಂಡ್ ಕಮಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:6
14 ತಿಳಿವುಗಳ ಹೋಲಿಕೆ  

ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


“ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.


ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು