Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:9 - ಕನ್ನಡ ಸಮಕಾಲಿಕ ಅನುವಾದ

9 ಯೇಸುವಿನ ಶಿಷ್ಯರು ಅವರನ್ನು ಈ ಸಾಮ್ಯದ ಅರ್ಥ ಏನಾಗಿರಬಹುದು? ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಿಷ್ಯರು, ‘ಈ ಸಾಮತಿಯ ಅರ್ಥವೇನು?’ ಎಂದು ಕೇಳಿದಾಗ, ಯೇಸು ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನ ಶಿಷ್ಯರು - ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಶಿಷ್ಯರು ಆತನಿಗೆ, “ಈ ಸಾಮ್ಯದ ಅರ್ಥವೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯಾ ಕಾನಿಚೊ ಅರ್ತ್‍ ಕಾಯ್ ಮನುನ್ ಶಿಸಾನಿ ಜೆಜುಕ್ ಇಚಾರ್‍ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:9
9 ತಿಳಿವುಗಳ ಹೋಲಿಕೆ  

ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.


“ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:


ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.


ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು