Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:10 - ಕನ್ನಡ ಸಮಕಾಲಿಕ ಅನುವಾದ

10 ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪೊಸ್ತಲಾ ಪರ್ತುನ್ ಯೆಲಿ, ಅನಿ ಅಪ್ನಿ ಕಾಯ್-ಕಾಯ್ ಕರಲ್ಲೆ ತೆನಿ ಜೆಜುಕ್ ಸಾಂಗ್ಲ್ಯಾನಿ. ಜೆಜುನ್ ತೆಂಕಾ ಅಪ್ನಾಚ್ಯಾ ವಾಂಗ್ಡಾ ಘೆಟ್ಲ್ಯಾನ್, ಅನಿ ತೆನಿ ಬೆತ್ಸಾಯಿದಾ ಮನ್ತಲ್ಯಾ ಶಾರ್ ಗಾಂವಾಕ್ ಪಾಯ್ ವಾಟೆನಿ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:10
10 ತಿಳಿವುಗಳ ಹೋಲಿಕೆ  

“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


“ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.


ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು