Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:12 - ಕನ್ನಡ ಸಮಕಾಲಿಕ ಅನುವಾದ

12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದಿಸ್ ಬುಡುಕ್ ಯೆಲ್ಲ್ಯಾತನ್ನಾ ಬಾರಾ ಜಾನಾ ಶಿಸಾ ಜೆಜುಕ್ಡೆ ಗೆಲಿ, ಅನಿ “ಲೊಕಾಕ್ನಿ ಧಾಡುನ್ ದಿ, ತೆನಿ ಜಾವ್ನ್ ಗಾಂವಾತ್ನಿ, ಅನಿ ಶೆತಾತ್ನಿ ಅಪ್ನಾಕ್ ಜೆವ್ಕ್ ಅನಿ ರಾವ್ಕ್ ಕಾಯ್ತರ್ ಯವಸ್ತಾ ಕರುನ್ ಘೆಂವ್ದಿತ್, ಅದ್ದಿಚ್ ಹ್ಯೊ ಜಾಗೊ ಬಗಟ್ಲ್ಯಾರ್, ಕಡೆಕ್ ಕಾಡುನ್ ಟಾಕಲ್ಲ್ಯಾ ಸಾರ್ಕೊ ಹಾಯ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:12
13 ತಿಳಿವುಗಳ ಹೋಲಿಕೆ  

ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.


ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.


ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.


ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.


ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.


ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.


ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು