Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:35 - ಕನ್ನಡ ಸಮಕಾಲಿಕ ಅನುವಾದ

35 ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಗ ಆ ಮೋಡದೊಳಗಿಂದ - ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾಚ್ ಮೊಡಾತ್ನಾ “ಹ್ಯೊ ಮಾಜೊ ಲೆಕ್, ಮಿಯಾ ಎಚುನ್ ಕಾಡಲ್ಲೊ, ತೆಕಾ ಆಯ್ಕಾ!” ಮನ್ತಲೊ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:35
19 ತಿಳಿವುಗಳ ಹೋಲಿಕೆ  

ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.


ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು