Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:51 - ಕನ್ನಡ ಸಮಕಾಲಿಕ ಅನುವಾದ

51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:51
29 ತಿಳಿವುಗಳ ಹೋಲಿಕೆ  

ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.


ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.


ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,


ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.


ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.


ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ


ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು