Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:54 - ಕನ್ನಡ ಸಮಕಾಲಿಕ ಅನುವಾದ

54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ಕಂಡು - ಸ್ವಾಮೀ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶಮಾಡಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಜಾಕೊಬ್ ಅನಿ ಜುವಾಂವ್ ಹೆ ಬಗುನ್ “ಧನಿಯಾ, ಸರ್‍ಗಾ ವೈನಾ ಆಗ್ ಯೆವ್ನ್ ಹ್ಯಾ ಲೊಕಾಕ್ನಿ ಭಾಜುನ್ ಟಾಕುಂದಿ ಮನುನ್ ಮಾಗುವಾ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:54
14 ತಿಳಿವುಗಳ ಹೋಲಿಕೆ  

ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.


ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.


ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.


ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.


ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.


ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು