Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:7 - ಕನ್ನಡ ಸಮಕಾಲಿಕ ಅನುವಾದ

7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಜು-ಬಾಜುನ್ ಹೊತಲ್ಯಾ ಕಾಮಾಂಚ್ಯಾ ವಿಶಯಾತ್ ಆಯ್ಕುನ್, ಗಾಲಿಲಿಯಾಚೊ ಅದಿಕಾರಿ ಹೆರೊದ್ ಲೈ ಗೊಂದಳ್ಳೊ, ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಝಿತ್ತೊ ಹೊವ್ನ್ ಉಟುನ್ ಯೆಲಾ ಮನುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:7
13 ತಿಳಿವುಗಳ ಹೋಲಿಕೆ  

ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.


ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.


ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,


ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.


ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.


ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು