Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವಿುಡಿತೆಗಳು ಐಗುಪ್ತದೇಶದಲ್ಲೆಲ್ಲಾ ಬಂದು ಐಗುಪ್ತದೇಶದ ಎಲ್ಲಾ ಕಡೆಯಲ್ಲಿಯೂ ಅಪರಿವಿುತವಾಗಿ ಇಳಿದವು. ಅಂಥ ವಿುಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲಿಕ್ಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:14
13 ತಿಳಿವುಗಳ ಹೋಲಿಕೆ  

ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.


ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.


ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;


ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.


ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು