Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:17 - ಕನ್ನಡ ಸಮಕಾಲಿಕ ಅನುವಾದ

17 ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:17
13 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.


ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು.


ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು