ವಿಮೋಚನಕಾಂಡ 10:23 - ಕನ್ನಡ ಸಮಕಾಲಿಕ ಅನುವಾದ23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು. ಅಧ್ಯಾಯವನ್ನು ನೋಡಿ |