Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:26 - ಕನ್ನಡ ಸಮಕಾಲಿಕ ಅನುವಾದ

26 ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:26
12 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.


ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.


ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.


ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು.


ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು