Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:3 - ಕನ್ನಡ ಸಮಕಾಲಿಕ ಅನುವಾದ

3 ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:3
28 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.


ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.


ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


“ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ?


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


“ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ


ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು