Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ - ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲವಾದದರಿಂದ ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನು ಹೆಚ್ಚಾಗಿ ನಡಿಸುವದಕ್ಕೆ ನನಗೆ ಆಸ್ಪದವಾಗುವದೆಂಬದಾಗಿ ಹೇಳಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:9
5 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು