ವಿಮೋಚನಕಾಂಡ 12:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |