ವಿಮೋಚನಕಾಂಡ 12:14 - ಕನ್ನಡ ಸಮಕಾಲಿಕ ಅನುವಾದ14 “ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು. ಅಧ್ಯಾಯವನ್ನು ನೋಡಿ |