ವಿಮೋಚನಕಾಂಡ 12:15 - ಕನ್ನಡ ಸಮಕಾಲಿಕ ಅನುವಾದ15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿ |