Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:16 - ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೊದಲನೆಯ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು. ಈ ಎರಡು ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನೂ ಮಾಡಕೂಡದು. ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಆಚರಣೆಯನ್ನು ನೀವು ಕೈಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:16
21 ತಿಳಿವುಗಳ ಹೋಲಿಕೆ  

ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.


ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.


“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


ಆರನೆಯ ದಿವಸದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ, ಪ್ರತಿದಿನ ಕೂಡಿಸುವುದಕ್ಕಿಂತಲೂ ಎರಡರಷ್ಟಾಗಿರುವುದು,” ಎಂದು ಹೇಳಿದರು.


ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು