Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ರಾತ್ರಿಯಲ್ಲಿ ಫರೋಹನೂ ಅವನ ಪರಿವಾರದವರೂ ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಶವವಿಲ್ಲದ ಮನೆ ಒಂದೂ ಇರಲಿಲ್ಲವಾದದರಿಂದ ಐಗುಪ್ತದೇಶದಲ್ಲಿ ದೊಡ್ಡ ಗೋಳಾಟವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:30
9 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.


ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.


ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ಫರೋಹನು ಅವರಿಗೆ, “ನಾನು ನಿಮ್ಮ ಮಡದಿ ಮಕ್ಕಳನ್ನೂ ಕಳುಹಿಸಿಕೊಟ್ಟು, ಯೆಹೋವ ದೇವರು ನಿಮ್ಮ ಸಂಗಡ ಇರಲಿ ಎಂದು ನಾನು ಹೇಳಬಯಸುವಿರೋ? ಇಲ್ಲಾ! ನೀವು ಕೇಡು ಮಾಡಲು ನಿರ್ಧರಿಸಿರುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು