ವಿಮೋಚನಕಾಂಡ 12:31 - ಕನ್ನಡ ಸಮಕಾಲಿಕ ಅನುವಾದ31 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿ. ಅಧ್ಯಾಯವನ್ನು ನೋಡಿ |