Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:32 - ಕನ್ನಡ ಸಮಕಾಲಿಕ ಅನುವಾದ

32 ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ! ನನ್ನನ್ನು ಆಶೀರ್ವದಿಸಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:32
8 ತಿಳಿವುಗಳ ಹೋಲಿಕೆ  

ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು.


ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ, ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ, “ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು,” ಎಂದನು.


ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.


ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.


ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.


ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು