Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:42 - ಕನ್ನಡ ಸಮಕಾಲಿಕ ಅನುವಾದ

42 ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:42
6 ತಿಳಿವುಗಳ ಹೋಲಿಕೆ  

“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು