Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:6 - ಕನ್ನಡ ಸಮಕಾಲಿಕ ಅನುವಾದ

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:6
34 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.


“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.


ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.


ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.


ಆಗ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.


ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.


ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.


ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು.


ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಇಸ್ರಾಯೇಲಿನ ಸಮೂಹದಲ್ಲಿರುವವರೆಲ್ಲರೂ ಇದನ್ನು ಆಚರಿಸಬೇಕು.


ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.


ಇಸ್ರಾಯೇಲರು ಈಜಿಪ್ಟನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.


ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.


ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.


ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.


ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು