Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:14 - ಕನ್ನಡ ಸಮಕಾಲಿಕ ಅನುವಾದ

14 “ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:14
29 ತಿಳಿವುಗಳ ಹೋಲಿಕೆ  

ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.


“ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.


ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.


ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.


ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.


ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.


ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು