17 ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.
17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
17 ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.
17 ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು.
17 ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.
ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,
“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.
ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.
ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.
ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.