Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ ಜೋಸೆಫನು ಇಸ್ರಯೇಲರಿಗೆ, “ಖಂಡಿತವಾಗಿ ದೇವರು ನಿಮ್ಮ ನೆರವಿಗೆ ಬರುವರು; ತಮ್ಮ ವಾಗ್ದಾನವನ್ನು ಈಡೇರಿಸುವರು. ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಆದುದರಿಂದಲೆ ಮೋಶೆ ಅವನ ಶವವನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಯೋಸೇಫನು ಇಸ್ರಾಯೇಲ್ಯರಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವನಾದದರಿಂದ ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕೆಂದು ಹೇಳಿ ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದದರಿಂದ ಮೋಶೆಯು ಅವನ ಶವವನ್ನು ಸಂಗಡ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:19
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.


ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು