Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಹಗಲುಹೊತ್ತಿನಲ್ಲಿ ದಾರಿತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವರ ಮುಂಭಾಗದಲ್ಲಿ ಹೋದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:21
21 ತಿಳಿವುಗಳ ಹೋಲಿಕೆ  

ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.


ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.


ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.


ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.


ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಅವರು ಪಾಳೆಯದಿಂದ ಹೊರಟಾಗ, ಯೆಹೋವ ದೇವರ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.


ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ,


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಫರೋಹನು ಅವರಿಗೆ, “ನಾನು ನಿಮ್ಮ ಮಡದಿ ಮಕ್ಕಳನ್ನೂ ಕಳುಹಿಸಿಕೊಟ್ಟು, ಯೆಹೋವ ದೇವರು ನಿಮ್ಮ ಸಂಗಡ ಇರಲಿ ಎಂದು ನಾನು ಹೇಳಬಯಸುವಿರೋ? ಇಲ್ಲಾ! ನೀವು ಕೇಡು ಮಾಡಲು ನಿರ್ಧರಿಸಿರುವಿರಿ?


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು