Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:5
31 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.


ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


“ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು.


ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.


“ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಹಿವ್ವಿಯರು, ಅರ್ಕಿಯರು, ಸೀನಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು