Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:6 - ಕನ್ನಡ ಸಮಕಾಲಿಕ ಅನುವಾದ

6 ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವ ದೇವರಿಗೆ ಹಬ್ಬವನ್ನಾಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:6
6 ತಿಳಿವುಗಳ ಹೋಲಿಕೆ  

ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.


ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು