Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:11
14 ತಿಳಿವುಗಳ ಹೋಲಿಕೆ  

ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?


ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು