ವಿಮೋಚನಕಾಂಡ 14:17 - ಕನ್ನಡ ಸಮಕಾಲಿಕ ಅನುವಾದ17 ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು. ಅಧ್ಯಾಯವನ್ನು ನೋಡಿ |