Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:18
9 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು