Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:20 - ಕನ್ನಡ ಸಮಕಾಲಿಕ ಅನುವಾದ

20 ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:20
9 ತಿಳಿವುಗಳ ಹೋಲಿಕೆ  

ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.


ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು