Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:23 - ಕನ್ನಡ ಸಮಕಾಲಿಕ ಅನುವಾದ

23 ಈಜಿಪ್ಟಿನವರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆ ಸವಾರರೂ ಅವರನ್ನು ಹಿಂದಟ್ಟಿ, ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ ರಥಗಳೂ ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಫರೋಹನು ತನ್ನ ಎಲ್ಲಾ ರಥಗಳೊಡನೆ ಮತ್ತು ರಾಹುತರೊಡನೆ ಅವರನ್ನು ಹಿಂಬಾಲಿಸಿ ಸಮುದ್ರದೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:23
7 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು