Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:25 - ಕನ್ನಡ ಸಮಕಾಲಿಕ ಅನುವಾದ

25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:25
26 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.


ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.


ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಯೆಹೋವ ದೇವರು ಸೀಸೆರನನ್ನೂ, ಅವನ ಎಲ್ಲಾ ರಥಗಳನ್ನೂ, ಅವನ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಖಡ್ಗದಿಂದ ಚದರಿಸಿದರು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಯೆಹೋವ ದೇವರು ಯುದ್ಧವೀರರು; ಯೆಹೋವ ದೇವರು ಎಂಬುದೇ ಅವರ ಹೆಸರು.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.


ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.


ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.


ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು